alex Certify ಸಿಎಂ ಯಡಿಯೂರಪ್ಪ ಸರ್ಕಾರದಿಂದ ರಾಜ್ಯದ ಜನತೆಗೆ ಮತ್ತೊಂದು ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಯಡಿಯೂರಪ್ಪ ಸರ್ಕಾರದಿಂದ ರಾಜ್ಯದ ಜನತೆಗೆ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ರಾಜ್ಯ ಸರ್ಕಾರ ಮುಂದಾಗಿದ್ದು ಜೂನ್ 8 ರಿಂದ ರಾಜ್ಯದಲ್ಲಿ ವಿವಿಧ ಚಟುವಟಿಕೆಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಜೂನ್ 30 ರವರೆಗೆ ಲಾಕ್ ಡೌನ್ ಮುಂದುವರೆದಿದ್ದು ಕರ್ಫ್ಯೂ ಅವಧಿಯನ್ನು ರಾತ್ರಿ 9 ರಿಂದ ಬೆಳಗ್ಗೆ 5  ಗಂಟೆಯವರೆಗೆ ನಿಗದಿ ಮಾಡಲಾಗಿದೆ. ಹೀಗಾಗಿ ರಾತ್ರಿ 9 ಗಂಟೆಯವರೆಗೆ ಮದ್ಯದಂಗಡಿಗಳಿಗೆ ಅವಕಾಶ ನೀಡುವ ಸಾಧ್ಯತೆಯಿದೆ. ಫಿಟ್ನೆಸ್ ಪ್ರಿಯರಿಗೆ ಸಿಹಿ ಸುದ್ದಿ ಸಿಗಲಿದ್ದು, ಜಿಮ್ ಓಪನ್ ಮಾಡಲು ಅವಕಾಶ ನೀಡಲಾಗುವುದು. ಪಾರ್ಕ್ ಅವಧಿಯನ್ನು ಕೂಡ ವಿಸ್ತರಿಸುವ ಸಾಧ್ಯತೆ ಇದೆ. ಬೆಳಗ್ಗೆ 5 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಿಯಮಾನುಸಾರ ವಿವಿಧ ಚಟುವಟಿಕೆಗಳಿಗೆ ಅವಕಾಶ ನೀಡಲಾಗುವುದು ಎಂದು ಹೇಳಲಾಗಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಮಾರ್ಗಸೂಚಿ ರೂಪಿಸಿ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...