ಬೆಂಗಳೂರು: ಕೊರೋನಾ ಲಸಿಕೆ ಸಿದ್ಧವಾದ ನಂತರ ಸರ್ಕಾರದಿಂದ ರಾಜ್ಯದ ಎಲ್ಲಾ ಜನತೆಗೆ ಉಚಿತವಾಗಿ ನೀಡಲಾಗುವುದು.
ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಈ ಬಗ್ಗೆ ಮಾಹಿತಿ ನೀಡಿ, ರಾಜ್ಯದ ಜನತೆಗೆ ಉಚಿತವಾಗಿ ಲಸಿಕೆ ನೀಡುವುದಾಗಿ ಹೇಳಿದ್ದಾರೆ.
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ರಾಜ್ಯದ ಪ್ರತಿಯೊಬ್ಬರಿಗೂ ಆದಷ್ಟು ಬೇಗನೆ ಲಸಿಕೆ ಒದಗಿಸುವುದು ಸರ್ಕಾರದ ಗುರಿಯಾಗಿದೆ ಎಂದು ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದ ಆರೋಗ್ಯ ಕಾರ್ಯಕರ್ತರಿಗೆ ಬಳಿಕ ಇತರರಿಗೆ ಲಸಿಕೆ ನೀಡಲಾಗುವುದು. ಕೇಂದ್ರದ ಮಾರ್ಗಸೂಚಿ ಮತ್ತು ಕಾರ್ಯತಂತ್ರಗಳ ಅನ್ವಯ ಆರೋಗ್ಯ ಕಾರ್ಯಕರ್ತರ ಮಾಹಿತಿ ಸಂಗ್ರಹಣೆ ಆರಂಭಿಸಲಾಗಿದೆ ಎಂದು ಹೇಳಲಾಗಿದೆ.