alex Certify ಅಂಕೆಗೆ ಸಿಗದ ಕೊರೋನಾಗೆ ಕಡಿವಾಣ ಹಾಕಲು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಕೇಂದ್ರ ‘ಸರ್ಕಾರ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಕೆಗೆ ಸಿಗದ ಕೊರೋನಾಗೆ ಕಡಿವಾಣ ಹಾಕಲು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಕೇಂದ್ರ ‘ಸರ್ಕಾರ’

ನವದೆಹಲಿ: ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಸೇರಿದಂತೆ ಹಲವು ಪರಿಣಾಮಕಾರಿ ಕ್ರಮ ಕೈಗೊಂಡಿದ್ದರೂ, ಹಲವು ರಾಜ್ಯಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ.

ಸೋಂಕು ಅನೇಕ ರಾಜ್ಯಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಮುಂಬೈ, ಪೂನಾ, ಇಂದೋರ್, ಜೈಪುರ್, ಕೊಲ್ಕತ್ತಾ ಮತ್ತು ಪಶ್ಚಿಮ ಬಂಗಾಳದ ಕೆಲವು ಪ್ರದೇಶಗಳಲ್ಲಿ ಗಂಭೀರ ಪರಿಸ್ಥಿತಿ ಇದೆ. ಇದೇ ರೀತಿ ಅನೇಕ ರಾಜ್ಯಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ರಾಜ್ಯಗಳಿಗೆ ಅಧಿಕಾರಿಗಳ ತಂಡ ರವಾನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ.

ಇದರೊಂದಿಗೆ ಲಾಕ್ ಡೌನ್ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ನಿರ್ಬಂಧ ಸಡಿಲಗೊಳಿಸದೇ ನಿಯಮಗಳನ್ನು ಕಟ್ಟು ನಿಟ್ಟಾಗಿ ಜಾರಿಗೆ ತರುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...