
ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದು, ರಾಜ್ಯದ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ 395.5 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.
ಕಂದಾಯ ಸಚಿವ ಆರ್. ಅಶೋಕ ಈ ಕುರಿತಾಗಿ ಮಾಹಿತಿ ನೀಡಿದ್ದು, ರಾಜ್ಯದ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ, SDRF ಫಂಡ್ ನಿಂದ 395.5 ಕೋಟಿ ರೂಪಾಯಿಯನ್ನು ಈಗ ಮುಂಗಡವಾಗಿ ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದಾರೆ.