ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ದೇಶಾದ್ಯಂತ ಜಾರಿಗೊಳಿಸಿದ್ದ ಲಾಕ್ ಡೌನ್ ತೆರವು ಮೂರನೇ ಹಂತದ ಮಾರ್ಗಸೂಚಿಗಳನ್ನು ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿದೆ. ರಾಜ್ಯದಲ್ಲಿಯೂ ಅನ್ಲಾಕ್ 3.0 ಮಾರ್ಗಸೂಚಿಯನ್ನು ಇಂದು ಪ್ರಕಟಿಸಲಾಗುವುದು.
ಹೆಚ್ಚುವರಿ ನಿರ್ಬಂಧವಿಲ್ಲದೆ ಕೇಂದ್ರದ ಮಾರ್ಗಸೂಚಿಗಳನ್ನು ಯಥಾವತ್ತಾಗಿ ಅನುಷ್ಠಾನಕ್ಕೆ ತರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕಂಟೈನ್ಮೆಂಟ್ ಜೋನ್ ಹೊರತುಪಡಿಸಿ ಉಳಿದೆಡೆ ನಿರ್ಬಂಧಗಳನ್ನು ವಿಧಿಸುವ ಕುರಿತಾಗಿ ರಾಜ್ಯ ಸರ್ಕಾರಗಳಿಗೆ ಕೇಂದ್ರದಿಂದ ಸೂಚನೆ ನೀಡಲಾಗಿದೆ.
ಅಂತರ ಜಿಲ್ಲೆ ಮತ್ತು ಅಂತರರಾಜ್ಯ ಸಂಚಾರಕ್ಕೆ ಪೂರ್ವಾನುಮತಿ ಅಗತ್ಯವಿಲ್ಲ. ರಾತ್ರಿ ಕರ್ಫ್ಯೂ ತೆರವುಗೊಳಿಸಲಾಗಿದ್ದು ಜಿಮ್, ಯೋಗ ಕೇಂದ್ರ ತೆರೆಯಲು ಅವಕಾಶ ನೀಡಲಾಗಿದೆ. ಈ ಮಾರ್ಗಸೂಚಿಗಳನ್ವಯ ರಾಜ್ಯ ಸರ್ಕಾರದ ವತಿಯಿಂದಲೂ ಎಂದು ವಿವರವಾಗಿ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು. ಬಹುತೇಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗುವುದು ಎಂದು ಹೇಳಲಾಗಿದೆ.