alex Certify ಮೋಟಾರು ವಾಹನ ತೆರಿಗೆ ಇಳಿಕೆ: ಸರ್ಕಾರದಿಂದ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೋಟಾರು ವಾಹನ ತೆರಿಗೆ ಇಳಿಕೆ: ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಮ್ಯಾಕ್ಸಿಕ್ಯಾಬ್ ತೆರಿಗೆ ಇಳಿಕೆ ಮಾಡಲಾಗಿದೆ. ರಾಜ್ಯದಲ್ಲಿ ಸಂಚರಿಸುವ 13 ರಿಂದ 20 ಸೀಟ್ ಹೊಂದಿರುವ ಮ್ಯಾಕ್ಸಿಕ್ಯಾಬ್ ಗಳಿಗೆ ಪ್ರತಿ ಸೀಟಿಗೆ ವಿಧಿಸಲಾಗಿದ್ದ 900 ರೂಪಾಯಿ ಮೋಟಾರು ವಾಹನ ತೆರಿಗೆಯನ್ನು 700 ರೂಪಾಯಿಗೆ ಇಳಿಕೆ ಮಾಡಲಾಗಿದೆ.

ಕರ್ನಾಟಕ ಮೋಟಾರು ವಾಹನಗಳ ತೆರಿಗೆ ಅಧಿನಿಯಮದ ಅಡಿಯಲ್ಲಿ ತೆರಿಗೆ ಇಳಿಕೆ ಮಾಡಲಾಗಿದೆ. ರಾಜ್ಯ ಟ್ರಾವೆಲ್ ಆಪರೇಟರ್ ಗಳ ಸಂಘ, ಪ್ರವಾಸಿ ವಾಹನ ಮಾಲೀಕರ ಸಂಘ, ಮ್ಯಾಕ್ಸಿಕ್ಯಾಬ್ ಮಾಲೀಕರ ಸಂಘ ಸೇರಿದಂತೆ ಹಲವಾರು ವಾಹನ ಮಾಲೀಕರು ಮತ್ತು ಚಾಲಕರ ಸಂಘಗಳಿಂದ ಸರ್ಕಾರಕ್ಕೆ ಈ ಕುರಿತಾಗಿ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸಿದ ಸರ್ಕಾರ 13 ರಿಂದ 20 ಆಸನ ಸಾಮರ್ಥ್ಯದ ಮ್ಯಾಕ್ಸಿಕ್ಯಾಬ್ ಗಳಿಗೆ ತೆರಿಗೆ ಇಳಿಕೆ ಮಾಡಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...