alex Certify ಗ್ರಾಮ ಪಂಚಾಯಿತಿ ಮೊದಲ ಸಭೆಯಲ್ಲೇ ನೂತನ ಸದಸ್ಯನಿಗೆ ಬಂದೆರಗಿದ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮ ಪಂಚಾಯಿತಿ ಮೊದಲ ಸಭೆಯಲ್ಲೇ ನೂತನ ಸದಸ್ಯನಿಗೆ ಬಂದೆರಗಿದ ಸಾವು

ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿಜೇತರಾಗಿದ್ದ ನೂತನ ಸದಸ್ಯರೊಬ್ಬರು ತಾವು ಪಾಲ್ಗೊಂಡಿದ್ದ ಮೊದಲ ಸಾಮಾನ್ಯ ಸಭೆಯಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಹುನಗುಂದ ತಾಲೂಕಿನ ಅಮರಾವತಿ ಗ್ರಾಮ ಪಂಚಾಯಿತಿ ಸದಸ್ಯ 46 ವರ್ಷದ ಬಾಲಪ್ಪ ಚೌಡಪ್ಪ ಚಲವಾದಿ ಮೃತಪಟ್ಟ ವ್ಯಕ್ತಿಯಾಗಿದ್ದು, ಇವರು ರಾಮವಾಡಗಿ ಗ್ರಾಮವನ್ನು ಪ್ರತಿನಿಧಿಸುತ್ತಿದ್ದರು.

ಸೋಮವಾರ ನಡೆದ ಪ್ರಥಮ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ್ದ ಅವರು, ತಾವು ಪ್ರತಿನಿಧಿಸಿದ್ದ ಗ್ರಾಮದಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಸುತ್ತಿದ್ದರು. ಈ ವೇಳೆ ಎದೆನೋವಿನಿಂದ ಏಕಾಏಕಿ ಅವರು ಕುಸಿದು ಬಿದ್ದಿದ್ದು ಕೂಡಲೇ ಅವರನ್ನು ಇಳಕಲ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...