ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಚುನಾವಣೆ ಆಯೋಗ ಸಿದ್ದತೆ ಮಾಡಿಕೊಂಡಿದೆ. ಅವಧಿ ಪೂರ್ಣಗೊಂಡ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಆಯೋಗಕ್ಕೆ ನಿರ್ಧಾರದ ಹೊಣೆ ನೀಡಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಕಾಂಗ್ರೆಸ್ ಮುಖಂಡ ಕೆ.ಸಿ. ಕೊಂಡಯ್ಯ ಮೊದಲಾದವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿದೆ. ಪ್ರಕರಣ ವಿಚಾರಣೆ ಹಂತದಲ್ಲಿದ್ದರೂ ಕೂಡ ಚುನಾವಣೆ ನಡೆಸುವ ಸಂಬಂಧ ನಿರ್ಧಾರ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ಮುಕ್ತವಾದ ಅವಕಾಶವಿದೆ ಎಂದು ಹೈಕೋರ್ಟ್ ತಿಳಿಸಿದೆ.
ರಾಜ್ಯದಲ್ಲಿ ಹಂತಹಂತವಾಗಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಆಯೋಗ ಸಿದ್ಧತೆ ಮಾಡಿಕೊಂಡಿದ್ದು, ಅವಧಿ ಪೂರ್ಣಗೊಂಡ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ನಿರ್ದೇಶನ ನೀಡಬೇಕೆಂದು ಕೆ.ಸಿ. ಕೊಂಡಯ್ಯ ಮತ್ತಿತರರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಚುನಾವಣೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡುವಂತೆ ಸರ್ಕಾರ ಕೇಳುತ್ತಿರುವುದು ಸರಿಯಲ್ಲವೆಂದು ನ್ಯಾಯಪೀಠ ಹೇಳಿದೆ. ಕೊರೋನಾ ಕಡಿಮೆ ಪ್ರಕರಣಗಳು ಇರುವ ಜಿಲ್ಲೆ ತಾಲೂಕು ಗಳನ್ನು ಆಯ್ದುಕೊಂಡು ಹಂತಹಂತವಾಗಿ ಚುನಾವಣೆ ನಡೆಸಬಹುದೆಂದು ಹೇಳಿದ್ದು ತೀರ್ಪು ಕಾಯ್ದಿರಿಸಿದೆ. ಹೀಗಿದ್ದರೂ ಆಯೋಗ ಚುನಾವಣೆ ನಡೆಸುವ ಬಗ್ಗೆ ನಿರ್ಧಾರ ಕೈಗೊಳ್ಳಬಹುದೆಂದು ಹೇಳಲಾಗಿದೆ.