ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಹೊರಡಿಸಿದ ಹೊಸ ಮಾರ್ಗಸೂಚಿಯನ್ವಯ ಎಲ್ಲ ಮುಂಜಾಗ್ರತೆ ಕ್ರಮ ಕೈಗೊಂಡು ರಾಜ್ಯ ಚುನಾವಣಾ ಆಯೋಗ ಈ ವರ್ಷಾಂತ್ಯಕ್ಕೆ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ಸಾಧ್ಯತೆ ಇದೆ.
ರಾಜ್ಯದಲ್ಲಿ 6025 ಗ್ರಾಮ ಪಂಚಾಯಿತಿಗಳಿದ್ದು ಜೂನ್-ಜುಲೈ ತಿಂಗಳಿನಲ್ಲಿ ಅವಧಿ ಅಂತ್ಯವಾಗಿದೆ. ಕೊರೋನಾ ಕಾರಣದಿಂದ ರಾಜ್ಯ ಚುನಾವಣಾ ಆಯೋಗ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮುಂದೂಡಿದೆ. ಇದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು, ರಾಜ್ಯದ 21 ಜಿಲ್ಲೆಗಳಲ್ಲಿ ಚುನಾವಣೆಗೆ ಮೀಸಲಾತಿ ಪಟ್ಟಿ ಸಿದ್ದವಾಗಿದ್ದು ಉಳಿದ ಜಿಲ್ಲೆಗಳ ಮೀಸಲಾತಿ ಪಟ್ಟಿಗೆ ಸಮಯ ನಿಗದಿಯಾಗಿದೆ.
ಈ ನಡುವೆ ಕೊರೊನಾ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಇದರ ಆಧಾರದ ಮೇಲೆ ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಮಾರ್ಗಸೂಚಿ ರೂಪಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಚುನಾವಣೆ ನಡೆಸಲಾಗುವುದು ಎಂದು ಹೇಳಲಾಗಿದೆ.