alex Certify ಬಿಗ್ ನ್ಯೂಸ್: ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ನಿಗದಿ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ನಿಗದಿ…?

ಬೆಂಗಳೂರು: ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿದ್ದ ಗ್ರಾಮ ಪಂಚಾಯಿತಿ ಚುನಾವಣೆ ಬಹುತೇಕ ಅಕ್ಟೋಬರ್ ಮೊದಲ ವಾರದಲ್ಲಿ ನಡೆಯಲಿದೆ.

ಹೈಕೋರ್ಟ್ ನ್ಯಾಯಪೀಠದಲ್ಲಿ ಪಂಚಾಯಿತಿ ಚುನಾವಣೆ ಮುಂದೂಡಿಕೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆದಿದೆ. ಈ ವೇಳೆ ಚುನಾವಣಾ ಆಯೋಗದ ವತಿಯಿಂದ ಪಂಚಾಯಿತಿ ಚುನಾವಣೆ ಕುರಿತಾಗಿ ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಲಾಗಿದೆ.

ಜುಲೈ 25ಕ್ಕೆ ಗ್ರಾಮ ಪಂಚಾಯಿತಿ ಚುನಾವಣೆ ಮೀಸಲಾತಿ ನೋಟಿಫಿಕೇಶನ್ ಕಾರ್ಯ ಮುಕ್ತಾಯವಾಗಲಿದೆ. ಸೆಪ್ಟೆಂಬರ್ ವೇಳೆಗೆ ಮತದಾರರ ಅಂತಿಮ ಪಟ್ಟಿ ಸಿದ್ಧವಾಗಲಿದ್ದು, ಇದಾದ ನಂತರ 5800 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಘೋಷಣೆ ಮಾಡಲಾಗುವುದು. ಕೊರೋನಾ ಪರಿಸ್ಥಿತಿ ಆಧರಿಸಿ ಅಕ್ಟೋಬರ್ ಮೊದಲ ವಾರದ ವೇಳೆಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗದ ವತಿಯಿಂದ ಪ್ರಮಾಣ ಪತ್ರ ಸಲ್ಲಿಸಲಾಗಿದೆ.

ಗ್ರಾಮ ಪಂಚಾಯಿತಿಗಳಿಗೆ ಅವಧಿ ಮುಗಿದರೂ ಚುನಾವಣೆ ನಡೆಸದೆ ಮುಂದೂಡಿಕೆ ಮಾಡಲಾಗಿದೆ ಎಂದು ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಕೊರೋನಾ ಲಾಕ್ಡೌನ್ ಕಾರಣದಿಂದ ಚುನಾವಣೆ ಮುಂದೂಡಿರುವ ಬಗ್ಗೆ ಚುನಾವಣಾ ಆಯೋಗ ಮಾಹಿತಿ ನೀಡಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...