alex Certify ಬಿಗ್ ನ್ಯೂಸ್: ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ – ಆ.31 ರೊಳಗೆ ಮತದಾರರ ಅಂತಿಮ ಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ – ಆ.31 ರೊಳಗೆ ಮತದಾರರ ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು: ಆಗಸ್ಟ್ 31 ರೊಳಗೆ ಗ್ರಾಮ ಪಂಚಾಯಿತಿ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ಹೈಕೋರ್ಟ್ಗೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಸಿದ್ಧತೆ ಪ್ರಗತಿಯಲ್ಲಿವೆ. ರಾಯಚೂರು, ಮೈಸೂರು, ಕೊಡಗು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ 27 ಜಿಲ್ಲೆಗಳ ಗ್ರಾಮ ಪಂಚಾಯಿತಿಗಳ ಮೀಸಲಾತಿಯ ಅಂತಿಮ ಗೆಜೆಟ್ ಹೊರಡಿಸಲಾಗಿದೆ ಎಂದು ಹೇಳಲಾಗಿದೆ.

ಆಗಸ್ಟ್ 31 ರೊಳಗೆ ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ಆಯೋಗದಿಂದ ಮಾಹಿತಿ ನೀಡಲಾಗಿದೆ. ವಿಧಾನಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ ಮೊದಲಾದವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠದಲ್ಲಿ ನಡೆದಿದ್ದು ಈ ವೇಳೆ ಚುನಾವಣಾ ಆಯೋಗ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...