ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಸರ್ಕಾರ ಸಿದ್ಧವಾಗಿದೆ. ಕೊರೋನಾ ಕಡಿಮೆಯಾದರೆ ಚುನಾವಣೆ ನಡೆಸಲು ಸಿದ್ಧವಾಗಿದ್ದು ಚುನಾವಣಾ ಆಯೋಗ ಸೂಚನೆ ಕೊಟ್ಟ ಕೂಡಲೇ ಎಲೆಕ್ಷನ್ ನಡೆಸಲು ಕಾಯತ್ತಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಈ ಕುರಿತು ಮಾಹಿತಿ ನೀಡಿ, ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಆಯೋಗದ ಸೂಚನೆ ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಈಗಾಗಲೇ ಮೀಸಲಾತಿ ಪಟ್ಟಿಯನ್ನು ಪ್ರಕಟ ಮಾಡಿದ್ದು, ಗೆಜೆಟ್ ನೋಟಿಫಿಕೇಷನ್ ಆಗಿದೆ. ಕಳೆದ ಮೇ, ಜೂನ್ ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆಗೆ ಆಯೋಗ ಸಿದ್ದತೆ ನಡೆಸಿದ್ದು ಕೊರೋನಾ ಕಾರಣದಿಂದಾಗಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಕೊರೋನಾ ನಿಯಂತ್ರಣಕ್ಕೆ ಬರುತ್ತಿದ್ದಂತೆ ಚುನಾವಣೆ ನಡೆಸಲಾಗುವುದು ಎಂದು ಹೇಳಲಾಗಿದೆ.