ಬೆಂಗಳೂರು: ಹೈಕೋರ್ಟ್ ಆದೇಶ ಮತ್ತು ಆಡಳಿತಾಧಿಕಾರಿ ನೇಮಕಗೊಂಡ ಆರು ತಿಂಗಳೊಳಗೆ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಬೇಕಿರುವುದರಿಂದ ಶೀಘ್ರವೇ ಗ್ರಾಮ ಪಂಚಾಯಿತಿ ಚುನಾವಣೆ ಅನಿವಾರ್ಯವೆಂದು ಚುನಾವಣಾ ಆಯೋಗ ಹೇಳಿದೆ.
ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಎಲ್ಲ ಕ್ರಮಕೈಗೊಳ್ಳಲಾಗಿದ್ದು ಡಿಸೆಂಬರ್ ಒಳಗೆ ಚುನಾವಣೆ ನಡೆಸುವುದು ಅನಿವಾರ್ಯವೆಂದು ರಾಜ್ಯಸರ್ಕಾರಕ್ಕೆ ಚುನಾವಣಾ ಆಯೋಗದ ವತಿಯಿಂದ ಪತ್ರ ಬರೆಯಲಾಗಿದೆ.
ಕೊರೋನಾ ಸಾಂಕ್ರಾಮಿಕ ರೋಗದ ಕಾರಣದಿಂದ ಚುನಾವಣೆ ಮುಂದೂಡುವಂತೆ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಚುನಾವಣಾ ಆಯೋಗ ಪರಿಶೀಲಿಸಿದೆ. ಚುನಾವಣೆ ಪ್ರಕ್ರಿಯೆ ಪ್ರತಿಹಂತದಲ್ಲೂ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮಾರ್ಗಸೂಚಿ ಹೊರಡಿಸಿದೆ.
ಗ್ರಾಮ ಪಂಚಾಯಿತಿ ಕ್ಷೇತ್ರದ ವ್ಯಾಪ್ತಿ ಚಿಕ್ಕ ತಿರುವುದ ರಿಂದ ಅಭ್ಯರ್ಥಿಗಳ ಪ್ರಚಾರ ಕ್ಷೇತ್ರಕ್ಕೆ ಸೀಮಿತವಾಗಿರುತ್ತದೆ ಎಂದು ಹೇಳಲಾಗಿದೆ. ಪಕ್ಷ ರಹಿತವಾದ ಚುನಾವಣೆ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಶೀಘ್ರದಲ್ಲೇ ನಡೆಸುವುದು ಅನಿವಾರ್ಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದೆ ಎನ್ನಲಾಗಿದೆ.