alex Certify 6024 ಗ್ರಾಮ ಪಂಚಾಯಿತಿ ಅವಧಿ ಮೇ 24 ಕ್ಕೆ ಅಂತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

6024 ಗ್ರಾಮ ಪಂಚಾಯಿತಿ ಅವಧಿ ಮೇ 24 ಕ್ಕೆ ಅಂತ್ಯ

ಬೆಂಗಳೂರು: ಮೇ 24ಕ್ಕೆ ರಾಜ್ಯದ 6024 ಗ್ರಾಮ ಪಂಚಾಯಿತಿಗಳ ಆಡಳಿತ ಅವಧಿ ಅಂತ್ಯಗೊಳ್ಳಲಿದ್ದು ನಾಮನಿರ್ದೇಶಿತ ಸಮಿತಿಗಳಿಗೆ ಆಡಳಿತ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರದ ನಿರ್ಧಾರಕ್ಕೆ ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

ಆಡಳಿತ ಸಮಿತಿ ರಚಿಸುವ ಬದಲು ಹಾಲಿ ಸದಸ್ಯರ ಅವಧಿಯನ್ನು ಆರು ತಿಂಗಳು ಮುಂದುವರಿಸುವಂತೆ ಒತ್ತಾಯಿಸಲಾಗಿದೆ. ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಆರು ತಿಂಗಳು ಮುಂದೂಡುವಂತೆ ರಾಜ್ಯ ಸರ್ಕಾರದ ವತಿಯಿಂದ ಈಗಾಗಲೇ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ.

ಚುನಾಯಿತ ಸದಸ್ಯರ ಆಡಳಿತ ಅವಧಿ ಮುಗಿದರೂ ಪಂಚಾಯಿತಿಗಳ ಕಾರ್ಯನಿರ್ವಹಣೆ ನಡೆಯುವುದರಿಂದ ನಾಮನಿರ್ದೇಶಿತ ಸದಸ್ಯರನ್ನು ಒಳಗೊಂಡ ಆಡಳಿತ ಸಮಿತಿ ರಚಿಸಲು ಸರ್ಕಾರ ಮಾರ್ಗಸೂಚಿ ಸಿದ್ಧಪಡಿಸುತ್ತಿದೆ. ಇದಕ್ಕೆ ವಿರೋಧ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು ಹಾಲಿ ಸದಸ್ಯರ ಅವಧಿಯನ್ನು ಮುಂದುವರಿಸುವಂತೆ ಒತ್ತಾಯಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...