alex Certify ಅತಿಥಿ ಉಪನ್ಯಾಸಕರ ನೆರವಿಗೆ ಧಾವಿಸಲು HDK ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿಥಿ ಉಪನ್ಯಾಸಕರ ನೆರವಿಗೆ ಧಾವಿಸಲು HDK ಆಗ್ರಹ

ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರು ಸಂಕಷ್ಟದಲ್ಲಿದ್ದು ರಾಜ್ಯ ಸರ್ಕಾರ ಅವರ ನೆರವಿಗೆ ಧಾವಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕೊರೋನಾ ಲಾಕ್ಡೌನ್ ನಿಂದಾಗಿ ಅತಿಥಿ ಉಪನ್ಯಾಸಕರು ವೇತನವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅತಿಥಿ ಉಪನ್ಯಾಸಕರಿಗೆ ಮೂರು ತಿಂಗಳ ವೇತನ ಬಿಡುಗಡೆ ಮಾಡುವ ಮೂಲಕ ಮಾನವೀಯ ನೆಲೆಗಟ್ಟಿನಲ್ಲಿ ಅವರ ನೆರವಿಗೆ ಧಾವಿಸಬೇಕು ಎಂದು ಹೇಳಿದ್ದಾರೆ.

ಅತಂತ್ರರಾಗಿರುವ ಅತಿಥಿ ಉಪನ್ಯಾಸಕರು ಹತಾಶೆಯಿಂದ ಆತ್ಮಹತ್ಯೆ ದಾರಿ ಹಿಡಿದಿದ್ದಾರೆ. ಸುಮಾರು 8 ಮಂದಿ ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿರುವುದು ದುರದೃಷ್ಟಕರವಾಗಿದೆ. ತಕ್ಷಣವೇ ಸರ್ಕಾರ ಮಾನವೀಯ ನೆಲೆಗಟ್ಟಿನಲ್ಲಿ ಅವರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...