ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯ ಮಾರ್ಗಸೂಚಿ ಪ್ರಕಟಿಸಲಾಗಿದೆ. ಮತದಾರರಿಗೆ ಮಾಸ್ಕ್ ಕಡ್ಡಾಯವಾಗಿದ್ದು ನಾಮಪತ್ರ ಸ್ವೀಕಾರದ ವೇಳೆಯಲ್ಲಿ ಗ್ಲೌಸ್, ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಿದೆ.
ಕೋವಿಡ್ ಸೋಂಕಿತ ಸೂಚಕರ ಮೂಲಕ ನಾಮಪತ್ರಕ್ಕೆ ಅವಕಾಶ, 5 ಜನರೊಂದಿಗೆ ಪ್ರಚಾರಕ್ಕೆ ಅವಕಾಶ ನೀಡಲಾಗಿದೆ. ಕೊರೊನಾ ಕಾರಣದಿಂದ ರಾಜ್ಯ ಚುನಾವಣಾ ಆಯೋಗ ಮಾರ್ಗಸೂಚಿ ನೀಡಿದೆ. 5800 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಬಗ್ಗೆ ತಜ್ಞರೊಂದಿಗೆ ನಡೆಸಿದ ಸಭೆಯಲ್ಲಿ ವ್ಯಕ್ತವಾದ ಸಲಹೆಗಳ ಆಧಾರದ ಮೇಲೆ ಮಾರ್ಗಸೂಚಿ ಸಿದ್ದಪಡಿಸಲಾಗಿದೆ.
ಗರಿಷ್ಠ 1000 ಮತದಾರರು ಮಾತ್ರ ಇರುವಂತೆ ಮತಗಟ್ಟೆಗಳನ್ನು ಗುರುತಿಸಬೇಕು. ಅಕ್ಕಪಕ್ಕದ ಕೊಠಡಿ ಸೇರಿದಂತೆ ಮತಗಟ್ಟೆ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ಟೇಬಲ್ ಹಾಕಬೇಕು ಸಂಪೂರ್ಣ ಸುರಕ್ಷತೆ ನಿಯಮಗಳನ್ನು ಅನುಸರಿಸುವ ಮೂಲಕ ಚುನಾವಣಾ ಪ್ರಕ್ರಿಯೆ ನಡೆಸಬೇಕು ಎಂದು ಹೇಳಲಾಗಿದೆ.