ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ ಉದ್ದೇಶದಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜಾರಿ ಮಾಡಿರುವ ಲಾಕ್ಡೌನ್ ಜುಲೈ 22 ರಂದು ಬೆಳಗ್ಗೆ 5 ಗಂಟೆಗೆ ಅಂತ್ಯವಾಗಲಿದೆ.
ಸರ್ಕಾರ ಇಂದು ಹೊಸ ಮಾರ್ಗಸೂಚಿ ಪ್ರಕಟಿಸಲಿದ್ದು ನೈಟ್ ಕರ್ಫ್ಯೂ ಮುಂದುವರೆಯಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡದಿರಲು ತೀರ್ಮಾನ ಕೈಗೊಳ್ಳಲಾಗಿದೆ.
ಲಾಕ್ಡೌನ್ ಜಾರಿಮಾಡದೇ ಕೊರೋನಾ ನಿಯಂತ್ರಿಸಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ. ಜುಲೈ 22ರಂದು ಬೆಳಿಗ್ಗೆ 5ಗಂಟೆಗೆ ಲಾಕ್ಡೌನ್ ಮುಕ್ತಾಯವಾಗಲಿದ್ದು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ.