alex Certify BIG NEWS: ಇನ್ನೆರಡು ದಿನದಲ್ಲೇ ಸಿಗಲಿದೆ ಮದ್ಯ – ಪಾನ್, ಗುಟ್ಕಾ, ತಂಬಾಕು ಮಾರಾಟಕ್ಕೂ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇನ್ನೆರಡು ದಿನದಲ್ಲೇ ಸಿಗಲಿದೆ ಮದ್ಯ – ಪಾನ್, ಗುಟ್ಕಾ, ತಂಬಾಕು ಮಾರಾಟಕ್ಕೂ ಅವಕಾಶ

ನವದೆಹಲಿ: ಕೇಂದ್ರ ಸರ್ಕಾರ ಮೇ 17 ರ ವರೆಗೆ ಲಾಕ್ಡೌನ್ ಮುಂದುವರೆಸಿದ್ದರೂ ಎಲ್ಲ ವಲಯಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ಇದರೊಂದಿಗೆ ಪಾನ್ ಮಸಾಲ, ಗುಟ್ಕಾ, ತಂಬಾಕು ಉತ್ಪನ್ನ ಮಾರಾಟಕ್ಕೆ ಅವಕಾಶ ನೀಡಲಾಗಿದೆ.

ದೇಶದಲ್ಲಿ ಮತ್ತೆ ಎರಡು ವಾರ ಲಾಕ್ಡೌನ್ ಮುಂದುವರಿಸಲಾಗಿದ್ದು, ಕೆಲವೊಂದು ವಾಣಿಜ್ಯ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಆರ್ಥಿಕತೆ ಉದ್ದೇಶದಿಂದ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೇ 4 ರಿಂದ ದೇಶಾದ್ಯಂತ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ.

ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದು, ಪಾರ್ಸೆಲ್ ತೆಗೆದುಕೊಂಡು ಹೋಗುವುದು  ಸೇರಿದಂತೆ ಹಲವು ನಿರ್ಬಂಧಗಳೊಂದಿಗೆ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದು, ಇದರ ಜೊತೆಗೆ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಹಿಂದಿನಂತೆಯೇ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸೇವನೆ ಮಾಡುವುದನ್ನು, ಉಗುಳುವುದನ್ನು ನಿಷೇಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...