alex Certify ಜೆಡಿಎಸ್ – ಬಿಜೆಪಿ ಮೈತ್ರಿ ಬಗ್ಗೆ ಕುತೂಹಲದ ಹೇಳಿಕೆ ನೀಡಿದ ಹೆಚ್.ಡಿ. ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ – ಬಿಜೆಪಿ ಮೈತ್ರಿ ಬಗ್ಗೆ ಕುತೂಹಲದ ಹೇಳಿಕೆ ನೀಡಿದ ಹೆಚ್.ಡಿ. ಕುಮಾರಸ್ವಾಮಿ

ರಾಮನಗರ: ನಾವು ಗೆದ್ದಾಗ ತಲೆ ತಿರುಗಿಲ್ಲ, ಸೋತಾಗ ಕೂಡ ಕುಗ್ಗಿಲ್ಲ. ಜನರ ಸೇವೆಗಾಗಿ ನಮ್ಮ ಕುಟುಂಬ ಇದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ತಿಟ್ಟಮಾರನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ರಾಜ್ಯಸಭೆಗೆ ಪ್ರವೇಶಿಸುತ್ತಿರುವುದು ದೈವೇಚ್ಛೆಯಾಗಿದೆ. ಜನ ಮತ್ತು ನಾಯಕರ ಒತ್ತಡಕ್ಕೆ ಕಟ್ಟುಬಿದ್ದು ದೇವೇಗೌಡರು ರಾಜ್ಯಸಭೆಗೆ ಹೋಗಲು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ.

ಕಳೆದ ಲೋಕಸಭೆ ಅವಧಿಯಲ್ಲಿ ರಾಜಕೀಯ ವಿದಾಯದ ಬಗ್ಗೆ ದೇವೇಗೌಡರು ಭಾಷಣ ಮಾಡಿದ್ದರು. ಆದರೆ ಜನರ ಒತ್ತಾಯಕ್ಕೆ ಮಣಿದು ತುಮಕೂರಿನಲ್ಲಿ ಸ್ಪರ್ಧಿಸಿ ಪರಾಭವಗೊಂಡರು. ಅವರ ರಾಜಕೀಯ ಅನುಭವದ ದೃಷ್ಟಿಯಿಂದ ಜನರ ಒತ್ತಾಯದ ಮೇರೆಗೆ ರಾಜ್ಯಸಭೆ ಗೆ ಹೋಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಬಿಜೆಪಿ – ಜೆಡಿಎಸ್ ಮೈತ್ರಿ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ರಾಜಕಾರಣದಲ್ಲಿ ಯಾವುದೂ ಶಾಶ್ವತವಲ್ಲ, ಏನಾದರೂ ಆಗಬಹುದು. ದೇವೇಗೌಡರು ರಾಜ್ಯಸಭೆಗೆ ಹೋಗುತ್ತಾರೆ ಎನ್ನುವುದು ಯಾರಿಗೆ ಗೊತ್ತಿತ್ತು ಎಂದು ಪ್ರಶ್ನಿಸುವ ಮೂಲಕ ಕುತೂಹಲ ಮೂಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...