ಸರ್ಕಾರ ಭರವಸೆ ನೀಡಿದಂತೆ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವಧನವನ್ನು ಕನಿಷ್ಠ 5000 ರೂಪಾಯಿ ಹೆಚ್ಚಳ ಮಾಡಬೇಕು. ಲಾಕ್ಡೌನ್ ಸಂದರ್ಭದಲ್ಲಿ ತಡೆಹಿಡಿಯಲಾಗಿದ್ದ ಗೌರವಧನದ ಬಾಕಿಯನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗ ಕನಿಷ್ಠ 15 ಸಾವಿರ ರೂಪಾಯಿವರೆಗೆ ಗೌರವಧನ ಹೆಚ್ಚಳ ಮಾಡಬೇಕು. 14 ವಿಧಾನಪರಿಷತ್ ಸದಸ್ಯರಿಗೆ ನೀಡಿದ ಭರವಸೆಯನ್ನು ತಕ್ಷಣವೇ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿದ್ದಾರೆ.
ಪದವಿ ಕಾಲೇಜುಗಳಲ್ಲಿ ಸುಮಾರು 15 ಸಾವಿರ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಬಿಜೆಪಿ ಸರ್ಕಾರ 15000 ರೂ. ಮಾಸಿಕ ಗೌರವ ಧನ ನೀಡುವ ಮೂಲಕ ಭರವಸೆ ಜಾರಿ ಮಾಡಬೇಕು. ಕಳೆದ ಸಲದ ಶೈಕ್ಷಣಿಕ ವರ್ಷದಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ ಎಲ್ಲರನ್ನು ಮತ್ತೆ ಮರು ನೇಮಕ ಮಾಡಿಕೊಳ್ಳುವ ಮೂಲಕ ಸಂಕಷ್ಟದಲ್ಲಿರುವ ಅತಿಥಿ ಉಪನ್ಯಾಸಕರಿಗೆ ಸರ್ಕಾರ ನೆರವಾಗಬೇಕೆಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.