alex Certify ಪೂರ್ವ ಸಿದ್ಧತೆ ಇಲ್ಲದೆ ಲಾಕ್ಡೌನ್ ಜಾರಿ, ಮುನ್ನೆಚ್ಚರಿಕೆ ಇಲ್ಲದೆ ಸಡಿಲ: ಕುಮಾರಸ್ವಾಮಿ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೂರ್ವ ಸಿದ್ಧತೆ ಇಲ್ಲದೆ ಲಾಕ್ಡೌನ್ ಜಾರಿ, ಮುನ್ನೆಚ್ಚರಿಕೆ ಇಲ್ಲದೆ ಸಡಿಲ: ಕುಮಾರಸ್ವಾಮಿ ಆಕ್ರೋಶ

ರಾಜ್ಯ ಸರ್ಕಾರ ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೂರ್ವ ಸಿದ್ಧತೆಗಳಿಲ್ಲದೆ ಜಾರಿ ಮಾಡಲಾದ ಲಾಕ್ ಡೌನ್ ಅನ್ನು ಈಗ ಮುನ್ನೆಚ್ಚರಿಕೆ ಇಲ್ಲದೆ ಸಡಿಲ ಮಾಡಲಾಗಿದೆ. ವಲಸೆ ಕಾರ್ಮಿಕರು ಊರಿಗೆ ಹೋಗಲು ಅವಕಾಶ ಮಾಡಿಕೊಟ್ಟಿರುವ ರಾಜ್ಯ ಸರ್ಕಾರ ಜನ ಭಾರಿ ಪ್ರಮಾಣದಲ್ಲಿ ಗುಂಪುಗೂಡುವಂತೆ ಮಾಡಿದೆ. ಈ ಮೂಲಕ ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ.

ವಿದೇಶದಿಂದ ಸೋಂಕು ಹೊತ್ತು ಬರುವವರನ್ನೆಲ್ಲ ಬರಮಾಡಿಕೊಂಡ ಸರ್ಕಾರ ಯಾವುದೇ ಪೂರ್ವ ಸಿದ್ಧತೆ ಇಲ್ಲದೆ ಜನರಿಗೆ ಮಾಹಿತಿ ನೀಡದೆ ಲಾಕ್ಡೌನ್ ಜಾರಿಮಾಡಿತು. ಜನ ಕೂಡ ಸರ್ಕಾರದ ನಿರ್ಧಾರ ಪಾಲಿಸಿದ್ದಾರೆ. ಹೀಗಾಗಿ ದೇಶ ಮತ್ತು ರಾಜ್ಯದಲ್ಲಿ ಕೋರೋನಾ ಸಂಪೂರ್ಣ ನೀಗದೇ ಹೋದರೂ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾದ ತಪ್ಪಿದೆ ಎಂದು ಹೇಳಿದ್ದಾರೆ.

ಇಷ್ಟು ದಿನ ಸಾವಿರಾರು ಕೋಟಿ ರೂಪಾಯಿಗಳನ್ನು ನಷ್ಟ ಮಾಡಿಕೊಂಡು ಪಾಲಿಲಾದ ಲಾಕ್ಡೌನ್ ನಿಂದ ಗಳಿಸಿಕೊಂಡಿದ್ದನ್ನು ಸರ್ಕಾರದ ಒಂದು ಅವೈಜ್ಞಾನಿಕ ನಡೆಯಿಂದ ಕಳೆದುಕೊಳ್ಳಬಾರದು. ಕಾರ್ಮಿಕರು ಮತ್ತು ಹಳ್ಳಿಗಳು ಸೌಖ್ಯವಾಗಿರಬೇಕು. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...