alex Certify ‘ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಸಾವು ಅನುಮಾನಾಸ್ಪದ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಸಾವು ಅನುಮಾನಾಸ್ಪದ’

ಶಿವಮೊಗ್ಗ: ಭದ್ರಾವತಿ ಕ್ಷೇತ್ರದ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಅವರ ಅವರ ಸಾವು ಅನುಮಾನಾಸ್ಪದವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಭದ್ರಾವತಿ ನ್ಯೂಟೌನ್ ನಲ್ಲಿ ಅಪ್ಪಾಜಿ ನಿವಾಸದ ಮುಂಭಾಗದಲ್ಲಿ ಏರ್ಪಡಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅಪ್ಪಾಜಿ ಸಾವಿನ ಬಗ್ಗೆ ಅನುಮಾನ ಮೂಡುತ್ತಿದೆ. ಅವರ ಕುಟುಂಬದವರು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಮಾಜಿ ಶಾಸಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಿಗಲಿಲ್ಲವೆಂದರೆ ಏನರ್ಥ? ಅವರಿಗೆ ಆಗದವರು ಸಾವಿಗೆ ಕಾರಣವಾಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಡ್ರಗ್ಸ್ ದಂಧೆಗೆ ಕಡಿವಾಣ ಹಾಕಲಿ ಇಂತಹ ದಂಧೆ ನಡೆಯುವ ಡ್ಯಾನ್ಸ್ ಬಾರ್ ಗಳನ್ನು ರಾಜ್ಯ ಸರ್ಕಾರ ನಿಷೇಧಿಸಬೇಕೆಂದು ಹೆಚ್.ಡಿ.ಕೆ. ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...