ಬಲವಂತವಾಗಿ ಹಿಂದಿ ಹೇರಿಕೆ ಮಾಡುತ್ತಿದ್ದಾರೆ. ಇದನ್ನು ನಾವು ವಿರೋಧಿಸುತ್ತೇವೆ ಎಂಬ ಕೂಗು ಹಲವಾರು ದಿನಗಳಿಂದ ಕೇಳಿಬರುತ್ತಲೇ ಇದೆ. ಇದೀಗ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕೂಡ ಹಿಂದಿ ಹೇರಿಕೆ ಮತ್ತು ಹಿಂದಿ ದಿವಸಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಟ್ವಿಟ್ ಮೂಲಕ ಕೇಂದ್ರ ಸರ್ಕಾರದ ವಿರುಧ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಹೆಚ್.ಡಿ. ಕುಮಾರಸ್ವಾಮಿ. ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ ಹಿಂದಿ ದಿವಸ್ ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ ಎಂದು ಟ್ವಿಟ್ ಮಾಡಿದ್ದಾರೆ.
ಹೀಗೆ ಹಿಂದಿ ಹೇರಿಕೆ ಕುರಿತಂತೆ 10ಕ್ಕೂ ಹೆಚ್ಚು ಸರಣಿ ಟ್ವಿಟ್ ಮಾಡಲು ಮೂಲಕ ಹಿಂದಿ ಹೇರಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಹಿಂದಿ ದಿನ ಆಚರಿಸುವುದೇ ಆದರೆ ಎಲ್ಲಾ ಭಾಷೆಯ ದಿನವನ್ನೂ ಆಚರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.