ಹೆಚ್. ವಿಶ್ವನಾಥ್ ಮತ್ತು ಎಂಟಿಬಿ ನಾಗರಾಜ್ ಅವರಿಗೆ ವಿಧಾನಪರಿಷತ್ ಟಿಕೆಟ್ ನೀಡುವ ಭರವಸೆ ನೀಡಿರಲಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ್ ನೀಡಿದ ಹೇಳಿಕೆಗೆ ಮಾಜಿ ಸಚಿವ ಹೆಚ್. ವಿಶ್ವನಾಥ್ ತಿರುಗೇಟು ನೀಡಿದ್ದಾರೆ.
ಅಶ್ವಥ್ ನಾರಾಯಣ್ ಉಪ ಮುಖ್ಯಮಂತ್ರಿ ಆಗಿದ್ದು ಯಾರಿಂದ ಎಂದು ಪ್ರಶ್ನಿಸಿದ್ದಾರೆ. ನಮ್ಮ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರ ನಡುವೆ ಏನು ಮಾತುಕತೆ ನಡೆದಿದೆ ಎನ್ನುವುದು ಅಶ್ವಥ್ ನಾರಾಯಣ ಅವರಿಗೆ ಏನು ಗೊತ್ತು ಎಂದು ಪ್ರಶ್ನಿಸಿದ್ದಾರೆ.
ಹುಣಸೂರು ಕ್ಷೇತ್ರದಲ್ಲಿ ನಾನು ಗೆದ್ದು ಶಾಸಕನಾಗಿದ್ದೆ. ಹಾಗಾಗಿ ಉಪಚುನಾವಣೆಯಲ್ಲಿ ನಾನೇ ಸ್ಪರ್ಧಿಸಿದ್ದೆ. ಸೋಲು ಕಂಡಿದ್ದೇನೆ. ದೇವೇಗೌಡರು, ಇಂದಿರಾಗಾಂಧಿ, ಸಿದ್ದರಾಮಯ್ಯ, ಯಡಿಯೂರಪ್ಪ, ಕುಮಾರಸ್ವಾಮಿ ಚುನಾವಣೆಯಲ್ಲಿ ಪರಾಭವಗೊಂಡಿರಲಿಲ್ಲವೇ? ಬಿಜೆಪಿಯಲ್ಲಿ ಸೋತವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.