![Training is a Key to Success For Any Organization, But it Can't be The Goal”](https://www.dqindia.com/wp-content/uploads/2018/10/training.png)
ಶಿವಮೊಗ್ಗ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿ.(ಹೆಚ್.ಎ.ಎಲ್), ಬೆಂಗಳೂರು ವತಿಯಿಂದ ಸಂಸ್ಥೆಯಲ್ಲಿ ಎಲೆಕ್ಟ್ರೀಷಿಯನ್, ವೆಲ್ಡರ್, ಕಂಪ್ಯೂಟರ್ ಆಪರೇಟರ್ ಆಂಡ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಅಪ್ರೆಂಟಿಶಿಪ್ ತರಬೇತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೊಂದಾಯಿಸಿರುವ ಎಸ್.ಎಸ್.ಎಲ್.ಸಿ ಪಾಸಾದ 15-18 ವರ್ಷದೊಳಗಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಗಳನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಎಂಪ್ಲಾಯ್‍ಮೆಂಟ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬಿಪಿಎಲ್/ಅಂತ್ಯೋದಯ ಕಾರ್ಡ್ ಹಾಗೂ ಇತ್ತೀಚಿನ ಭಾವಚಿತ್ರವನ್ನು ಲಗತ್ತಿಸಿ ಅ.29 ರೊಳಗಾಗಿ ಕಚೇರಿಗೆ ಸಲ್ಲಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, 2ನೇ ಕ್ರಾಸ್, ಪಂಪನಗರ, ಗುತ್ಯಪ್ಪ ಕಾಲೋನಿ, ಸಾಗರ ರಸ್ತೆ, ಇಲ್ಲಿ ಖುದ್ದಾಗಿ ಅಥವಾ ದೂ.ಸಂ: 08182-255293, ಮೊ.ಸ: 8861890866/9980184267 ಗಳನ್ನು ಸಂಪರ್ಕಿಸಬಹುದಾಗಿದೆ.