alex Certify ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ, ರೈಲ್ವೆ ಅಧಿಕಾರಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ, ರೈಲ್ವೆ ಅಧಿಕಾರಿ ಅರೆಸ್ಟ್

ಬೆಂಗಳೂರು: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರೈಲ್ವೆ ಅಧಿಕಾರಿಯೊಬ್ಬರನ್ನು ಬೆಂಗಳೂರು ಸಿಟಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ಸ್ವಚ್ಛತೆ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಮೇಲ್ವಿಚಾರಕಿಗೆ ಲೈಂಗಿಕ ಕಿರುಕುಳ ಆರೋಪ ನೀಡಿದ ಹಿನ್ನೆಲೆಯಲ್ಲಿ ಶ್ರೀಧರ್ ಎಂಬುವರನ್ನು ಬಂಧಿಸಲಾಗಿದೆ. ಸಂಗೊಳ್ಳಿ ರಾಯಣ್ಣ ರೈಲ್ವೆ ವಿಭಾಗದಲ್ಲಿ ಶ್ರೀಧರ್ ಕೆಲಸ ಮಾಡುತ್ತಿದ್ದು, ಮಹಿಳೆ ರೈಲ್ವೆ ಗಾಡಿಗಳ ಸ್ವಚ್ಛತಾ ಸಿಬ್ಬಂದಿ ಮೇಲ್ವಿಚಾರಕಿಯಾಗಿದ್ದಾರೆ.

ಭಾನುವಾರ ಮಧ್ಯಾಹ್ನ ಶ್ರಮಿಕ್ ಎಕ್ಸ್ ಪ್ರೆಸ್ ರೈಲು ಕ್ಲೀನ್ ಮಾಡುವ ಸಂದರ್ಭದಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದ ಹಿನ್ನೆಲೆಯಲ್ಲಿ ದೂರು ದಾಖಲಾಗಿ ಅವರನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...