alex Certify 40 ಕ್ಕೂ ಅಧಿಕ ಮಂದಿಗೆ ನಿಗೂಢ ಜ್ವರ, ಗ್ರಾಮದಲ್ಲಿ ಹೆಚ್ಚಾಯ್ತು ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

40 ಕ್ಕೂ ಅಧಿಕ ಮಂದಿಗೆ ನಿಗೂಢ ಜ್ವರ, ಗ್ರಾಮದಲ್ಲಿ ಹೆಚ್ಚಾಯ್ತು ಆತಂಕ

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಎರಡು ಗ್ರಾಮಗಳಲ್ಲಿ ನಿಗೂಢ ಜ್ವರದ ಭೀತಿ ಆವರಿಸಿದೆ. ಕಳೆದ ಎರಡು ವಾರಗಳಿಂದ 40 ಕ್ಕೂ ಹೆಚ್ಚು ಜನರಿಗೆ ಜ್ವರ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಕೊರೋನಾ ಸೋಂಕಿನ ಆತಂಕದ ನಡುವೆ ಜ್ವರದಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ನಿತ್ಯವೂ ಆಸ್ಪತ್ರೆಗಳಿಗೆ ಜನ ಬಂದು ಹೋಗುತ್ತಿದ್ದಾರೆ. ಖಾಸಗಿ ಕ್ಲಿನಿಕ್ ಗಳಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಗ್ರಾಮಗಳಲ್ಲಿ ಸ್ವಚ್ಛತೆ ಇಲ್ಲದೆ ಜ್ವರ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತಾಲ್ಲೂಕು ಆಡಳಿತದ ವಿರುದ್ಧ ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಹಾಸನ ಕೊರೋನಾ ಸೋಂಕಿನ ಯಾವುದೇ ಪ್ರಕರಣ ದಾಖಲಾಗಿಲ್ಲ. ಇದು ಗ್ರೀನ್ ಜೋನ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...