alex Certify ಹಾಸನದಲ್ಲಿ ಶತಕದತ್ತ ಕೊರೋನಾ ಸೋಂಕಿತರ ಸಂಖ್ಯೆ, 2 ಏರಿಯಾ ಕಂಟೇನ್ಮೆಂಟ್ ಜೋನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸನದಲ್ಲಿ ಶತಕದತ್ತ ಕೊರೋನಾ ಸೋಂಕಿತರ ಸಂಖ್ಯೆ, 2 ಏರಿಯಾ ಕಂಟೇನ್ಮೆಂಟ್ ಜೋನ್

ಹಾಸನದಲ್ಲಿ ಇವತ್ತು 14 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿವೆ. ನಿನ್ನೆಯವರೆಗೆ 84 ಪ್ರಕರಣಗಳು ಪತ್ತೆಯಾಗಿದ್ದು ಇಂದು 14 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 98ಕ್ಕೆ ಏರಿಕೆಯಾಗಿದೆ ಎನ್ನಲಾಗಿದೆ.

ಹಾಸನ ಜಿಲ್ಲೆಯಲ್ಲಿ ಮತ್ತೆ 14 ಮಂದಿಗೆ ಕೊರೋನಾ ಇರುವುದು ವೈದ್ಯಕೀಯ ವರದಿಯಲ್ಲಿ ಕಂಡು ಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಹಾಸನದ ಎರಡು ಏರಿಯಾಗಳನ್ನು ಕಂಟೇನ್ಮೆಂಟ್ ಜೋನ್ ಗಳಾಗಿ ಘೋಷಣೆ ಮಾಡಲಾಗಿದೆ.

ಉತ್ತರ ಬಡಾವಣೆ ಮತ್ತು ಸತ್ಯಮಂಗಲ ಬಡಾವಣೆಯನ್ನು ಕಂಟೇನ್ಮೆಂಟ್ ಜೋನ್ ಎಂದು ಘೋಷಿಸಿ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಬೆಂಗಳೂರಿನಿಂದ ಬಂದಿದ್ದ ಪೊಲೀಸ್ ಕಾನ್ಸ್ ಟೇಬಲ್ ಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಕಂಟೇನ್ಮೆಂಟ್ ಎಂದು ಘೋಷಣೆ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...