alex Certify ನಾಳೆಯಿಂದ ಮದ್ಯದಂಗಡಿ ಓಪನ್ ಆದ್ರೂ ವಾರದಲ್ಲಿ ಮೂರು ದಿನ ಮಾತ್ರ ಮಾರಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ ಮದ್ಯದಂಗಡಿ ಓಪನ್ ಆದ್ರೂ ವಾರದಲ್ಲಿ ಮೂರು ದಿನ ಮಾತ್ರ ಮಾರಾಟ

ಹಾಸನ: ಲಾಕ್ಡೌನ್ ನಿಯಮದಲ್ಲಿ ಸಡಿಲಿಕೆ ಮಾಡಲಾಗಿದ್ದು ನಾಳೆಯಿಂದ ಮದ್ಯದಂಗಡಿ ಆರಂಭವಾಗಲಿವೆ. ಬೆಳಗ್ಗೆ  9 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ.

ಹಸಿರು ವಲಯದಲ್ಲಿರುವ ಹಾಸನ ಜಿಲ್ಲೆಯಲ್ಲಿಯೂ ನಾಳೆಯಿಂದ ಮದ್ಯದಂಗಡಿ ಓಪನ್ ಆಗಲಿವೆ. ಆದರೆ, ವಾರದಲ್ಲಿ ಮೂರು ದಿನ ಮಾತ್ರ ಮದ್ಯ ಸೇರಿ ಅಗತ್ಯ ವಸ್ತುಗಳ ಖರೀದಿಗೆ ಹಾಸನ ಜಿಲ್ಲೆಯಲ್ಲಿ ಅವಕಾಶ ನೀಡಲಾಗಿದ್ದು ಉಳಿದಂತೆ ಮೇ 17 ರವರೆಗೆ ಲಾಕ್ ಡೌನ್ ಮುಂದುವರೆಯಲಿದೆ.

ಜಿಲ್ಲಾಧಿಕಾರಿ ಗಿರೀಶ್ ಅವರು ಈ ಕುರಿತು ಮಾಹಿತಿ ನೀಡಿ, ಮಂಗಳವಾರ, ಗುರುವಾರ, ಶನಿವಾರ ಮಾತ್ರ ಹಾಸನದಲ್ಲಿ ಮದ್ಯ, ಅಗತ್ಯ ವಸ್ತುಗಳು, ಇತರೆ ಅಂಗಡಿಗಳನ್ನು ತೆರೆಯಬಹುದು. ಉಳಿದ ದಿನಗಳಂದು ಎಂದಿನಂತೆ ಲಾಕ್ ಡೌನ್ ಮುಂದುವರೆಯಲಿದೆ. ಮೇ 17 ರವರೆಗೆ ಲಾಕ್ ಡೌನ್ ನಿಷೇಧ ಜಾರಿಯಲ್ಲಿರುತ್ತದೆ. ಐದಕ್ಕಿಂತ ಹೆಚ್ಚು ಜನ ಒಂದು ಕಡೆ ಸೇರುವಂತಿಲ್ಲ ಎಂದು ತಿಳಿಸಿದ್ದಾರೆ.

ಅಂತರಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದ್ದು ಅನಿವಾರ್ಯತೆ ಇರುವವರು ಪಾಸ್ ಪಡೆದು ಸಂಚರಿಸಬಹುದು. ಅಗತ್ಯಕ್ಕೆ ಅನುಗುಣವಾಗಿ ಜಿಲ್ಲೆಯೊಳಗೆ ಮಾತ್ರ ಬಸ್ ಸಂಚಾರ ಇರುತ್ತದೆ. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಅಂತರ ಕಾಯ್ದುಕೊಳ್ಳಬೇಕಿದೆ. ಯಾವುದೇ ನಿಬಂಧನೆ ಮೀರಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...