ಹಾವೇರಿ: ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡ ನೌಕರರು ಕಾರ್ಡ್ ವಾಪಸ್ ಮಾಡಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಈ ಕುರಿತು ಸೂಚನೆ ನೀಡಿದ್ದು, ಸರ್ಕಾರಿ ನೌಕರರು, ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯದ ಅಧಿಕಾರಿ, ನೌಕರರು ಬಡತನ ರೇಖೆಗಿಂತ ಕೆಳಗಿನವರು, ಬಡವರಿಗೆ ನೀಡುವ ಪಡಿತರ ಚೀಟಿ ಪಡೆದುಕೊಂಡಿರುವುದು ಅಕ್ಷಮ್ಯವಾಗಿದೆ ಎಂದು ಹೇಳಿದ್ದಾರೆ.
ಬಿಪಿಎಲ್ ಕಾರ್ಡ್ ಪಡೆದುಕೊಂಡ ಅಧಿಕಾರಿಗಳು, ನೌಕರರು ಕೂಡಲೇ ಹಿಂದಿರುಗಿಸಬೇಕು ಎಂದು ತಿಳಿಸಿದ್ದು, ಪರಿಶೀಲನೆ ಸಂದರ್ಭದಲ್ಲಿ ಯಾವುದೇ ನೌಕರರು ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವುದು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.