ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ ನಿಧನರಾಗಿದ್ದಾರೆ. ನಿನ್ನೆ ತಡರಾತ್ರಿ ವಯೋಸಹಜ ಕಾರಣದಿಂದ ಅವರು ನಿಧನರಾಗಿದ್ದಾರೆ.
95 ವರ್ಷಗಳ ತುಂಬು ಜೀವನ ನಡೆಸಿದ ಹೊನ್ನೂರಮ್ಮ ಇತ್ತೀಚೆಗಷ್ಟೇ ಕೋವಿಡ್ ಸೋಂಕಿಗೆ ತುತ್ತಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಬಳ್ಳಾರಿಯ ಮನೆಗೆ ಹಿಂತಿರುಗಿದ್ದರು. ತಡರಾತ್ರಿ ಅವರು ನಿಧನರಾಗಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.