ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು ಬೆಳಗಾವಿ-ಗೋವಾ ಘಾಟ್ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ.
ಬೆಳಗಾವಿ ಮತ್ತು ಗೋವಾ ಸಂಪರ್ಕ ರಸ್ತೆ ಹಾದುಹೋಗಿರುವ ಚೋರ್ಲಾ ಘಾಟ್ ನಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿ ಮಣ್ಣು, ಬಂಡೆ ಕಲ್ಲುಗಳು ರಸ್ತೆಗೆ ಬಿದ್ದಿವೆ. ಇದರ ಪರಿಣಾಮ ಸಂಪರ್ಕ ಕಡಿತವಾಗಿ ಕಿಲೋಮೀಟರ್ ವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ.
ಭಾರಿ ಪ್ರಮಾಣದ ಮಣ್ಣು, ಮರ, ಕಲ್ಲಿನ ರಾಶಿ ರಸ್ತೆಗೆ ಬಿದ್ದಿದ್ದು ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ. ಬೆಳಗಾವಿ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.