alex Certify ಗಮನಿಸಿ: 2 ದಿನ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: 2 ದಿನ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆಯಿಂದ ಜನ ತತ್ತರಿಸಿದ್ದಾರೆ. ರಾಜ್ಯದಲ್ಲಿ ಮಳೆ ಮುಂದುವರೆಯಲಿದ್ದು ಅಕ್ಟೋಬರ್ 27 ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳು ಮತ್ತು ಕರಾವಳಿ ಪ್ರದೇಶದಲ್ಲಿ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ ಎರಡು ದಿನಗಳ ಕಾಲ ತುಮಕೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...