ಬೆಂಗಳೂರು: ಉತ್ತರ ಕರ್ನಾಟಕ ಮತ್ತು ಕರಾವಳಿ ಪ್ರದೇಶದಲ್ಲಿ ಮತ್ತೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆಯಾಗಲಿದೆ. ಅಕ್ಟೋಬರ್ 21, 22 ರಂದು ಗುಡುಗು ಸಹಿತ ಮಳೆಯಾಗಲಿದೆ. ಅಕ್ಟೋಬರ್ 22ರಂದು ಬೀದರ್, ಕಲ್ಬುರ್ಗಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಅಕ್ಟೋಬರ್ 21 ರಂದು ಕರಾವಳಿ ಪ್ರದೇಶದ ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ವಾಯುಭಾರ ಕುಸಿತದ ಪರಿಣಾಮ ಮಲೆನಾಡು, ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.