alex Certify ಭಾರೀ ಮಳೆ, ಪ್ರವಾಹದಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರೀ ಮಳೆ, ಪ್ರವಾಹದಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ

ಬೆಂಗಳೂರು: ಉತ್ತರ ಕರ್ನಾಟಕ ಮತ್ತು ಕರಾವಳಿ ಪ್ರದೇಶದಲ್ಲಿ ಮತ್ತೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆಯಾಗಲಿದೆ. ಅಕ್ಟೋಬರ್ 21, 22 ರಂದು ಗುಡುಗು ಸಹಿತ ಮಳೆಯಾಗಲಿದೆ. ಅಕ್ಟೋಬರ್ 22ರಂದು ಬೀದರ್, ಕಲ್ಬುರ್ಗಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಅಕ್ಟೋಬರ್ 21 ರಂದು ಕರಾವಳಿ ಪ್ರದೇಶದ ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ವಾಯುಭಾರ ಕುಸಿತದ ಪರಿಣಾಮ ಮಲೆನಾಡು, ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...