alex Certify ಗಮನಿಸಿ…! ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಜುಲೈ 13 ರಿಂದ 17ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಗುಡುಗು, ಸಿಡಿಲು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಪ್ರದೇಶದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ.

ಅದೇ ರೀತಿ ದಕ್ಷಿಣ ಒಳನಾಡಿನ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಪ್ರದೇಶದಲ್ಲಿ ಗಂಟೆಗೆ ಸುಮಾರು 50 ಕಿ.ಮೀ. ವೇಗದ ಗಾಳಿ ಬೀಸುತ್ತಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...