alex Certify ಗಮನಿಸಿ: ಕರಾವಳಿ ಸೇರಿ ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಕರಾವಳಿ ಸೇರಿ ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ. ಅಕ್ಟೋಬರ್ 13 ರ ಇಂದಿನಿಂದ 15 ರವರೆಗೆ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ. ಅಕ್ಟೋಬರ್ 16, 17 ರಂದು ರಾಜ್ಯದ ಬಹುತೇಕ ಭಾಗದಲ್ಲಿ ಭಾರಿ ಮಳೆಯಾಗುತ್ತದೆ.

ಕರಾವಳಿ ಪ್ರದೇಶದಲ್ಲಿ ಅತಿ ಹೆಚ್ಚು ಮಳೆ ಬರುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾಗಲಿದೆ.

ಅದೇ ರೀತಿ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಕೊಪ್ಪಳ, ಯಾದಗಿರಿ, ಕಲಬುರ್ಗಿ, ಬೀದರ್, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಅಂದಾಜು 20 ಸೆಂಟಿಮೀಟರ್ ವರೆಗೂ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...