alex Certify ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಅಪಾಯದಿಂದ ಪಾರಾದ ಶಾಸಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಅಪಾಯದಿಂದ ಪಾರಾದ ಶಾಸಕ

ಶಿವಮೊಗ್ಗ: ವಿಧಾನಪರಿಷತ್ ಸದಸ್ಯ ರಘು ಆಚಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಹವಾಮಾನ ವೈಪರೀತ್ಯದಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಶಾಲೆಯ ಮೈದಾನದಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ನಿಶ್ಚಿತಾರ್ಥ ಸಮಾರಂಭದಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ರಘು ಆಚಾರ್, ಮುಳಬಾಗಿಲು ಮಾಜಿ ಶಾಸಕ ಮಂಜು ಸೇರಿದಂತೆ ನಾಲ್ವರು ಪ್ರಯಾಣಿಸುತ್ತಿದ್ದರು.

ಶಿವಮೊಗ್ಗ ಭಾಗದಲ್ಲಿ ಭಾರಿ ಮಳೆ ಹವಾಮಾನ ವೈಪರೀತ್ಯದಿಂದಾಗಿ ಶಾಲೆ ಮೈದಾನದಲ್ಲಿ ಹೆಲಿಕಾಪ್ಟರ್ ಭೂಸ್ಪರ್ಶ ಮಾಡಿದೆ. ಗ್ರಾಮಸ್ಥರು ಕುತೂಹಲದಿಂದ ಹೆಲಿಕಾಪ್ಟರ್ ಸುತ್ತುವರೆದು ವೀಕ್ಷಿಸಿದ್ದಾರೆ. ಮಳೆ ಇಳಿಮುಖವಾದ ನಂತರ ಹೆಲಿಕಾಪ್ಟರ್ ನಲ್ಲಿ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...