ಮಕ್ಕಳ ಆನ್ಲೈನ್ ಶಿಕ್ಷಣಕ್ಕೆ ಚಿನ್ನದ ತಾಳಿ ಸರ ಅಡವಿಟ್ಟ ಗದಗ ಜಿಲ್ಲೆ ನರಗುಂದ ತಾಲೂಕಿನ ರೆಡ್ಡೇರನಾಗೂರ ಗ್ರಾಮದ ಗ್ರಾಮದ ಕಸ್ತೂರಮ್ಮ ಅವರಿಗೆ ನೆರವಿನ ಮಹಾಪೂರ ಹರಿದು ಬಂದಿದೆ.
ಕಸ್ತೂರಮ್ಮ ಅವರ ಮಕ್ಕಳು 6, 8 ಮತ್ತು 9ನೇ ತರಗತಿಯಲ್ಲಿ ಓದುತ್ತಿದ್ದು, ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟು ಟಿವಿ ಖರೀದಿಸಿದ್ದರು.
ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದು ಅನೇಕರು ನೆರವು ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ ಪ್ರತಿ ತಿಂಗಳು ಸಾವಿರ ರೂಪಾಯಿಯಂತೆ ಮೂರು ವರ್ಷದವರೆಗೂ ಸೌಲಭ್ಯ ಕಲ್ಪಿಸುವ ಭರವಸೆ ನೀಡಿದ್ದಾರೆ. ಅದೇ ರೀತಿ ಮಾಜಿ ಸಚಿವ ಜಮೀರ್ ಅಹಮದ್ ಹಣಕಾಸು ನೆರವು ನೀಡಿದ್ದಾರೆ. ಅನೇಕ ಜನಪ್ರತಿನಿಧಿಗಳು ಸಾರ್ವಜನಿಕರು ನೆರವು ನೀಡಿದ್ದಾರೆ.