alex Certify ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಶಿಕ್ಷಣ ಇಲಾಖೆಯಿಂದ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಶಿಕ್ಷಣ ಇಲಾಖೆಯಿಂದ ‘ಗುಡ್ ನ್ಯೂಸ್’

ಬೆಂಗಳೂರು: ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ಪೋಷಕರಿಗೆ ಖಾಸಗಿ ಶಾಲೆಗಳಿಂದ ಶುಲ್ಕ ಹೆಚ್ಚಳಕ್ಕೆ ಒತ್ತಡ ಹೇರುವಂತಿಲ್ಲ ಎಂದು ಸರ್ಕಾರ ಈಗಾಗಲೇ ಸೂಚನೆ ನೀಡಿದೆ.

ಇದರ ಮುಂದುವರೆದ ಭಾಗವಾಗಿ ಶಾಲೆ ಶುಲ್ಕ ಹೆಚ್ಚಳ ವಿರುದ್ಧ ದೂರು ಸಲ್ಲಿಕೆಗೆ ಸಹಾಯವಾಣಿ ಆರಂಭಿಸಲಾಗಿದೆ. ಸರ್ಕಾರದ ಆದೇಶವನ್ನು ಮೀರಿ ಖಾಸಗಿ ಶಾಲೆಗಳಲ್ಲಿ ಶುಲ್ಕ ಹೆಚ್ಚಿಸುವ ಬಗ್ಗೆ ಮತ್ತು ಕಡ್ಡಾಯವಾಗಿ ಶುಲ್ಕ ಪಾವತಿಸುವಂತೆ ಪೋಷಕರಿಗೆ ಒತ್ತಾಯಪಡಿಸಿದರೆ ದೂರು ದಾಖಲಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕೇಂದ್ರೀಕೃತ ಸಹಾಯವಾಣಿಯನ್ನು ಆರಂಭಿಸಿದೆ

ಶುಲ್ಕ ಹೆಚ್ಚಳ ಮಾಡದಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು ಶುಲ್ಕ ಪಾವತಿಸಲು ಸಾಧ್ಯವಾದ ಪೋಷಕರಿಂದ ಮಾತ್ರ ಶುಲ್ಕ ಪಡೆಯುವಂತೆ ತಿಳಿಸಲಾಗಿದೆ. ನಿಯಮ ಮೀರಿ ಶಿಕ್ಷಣ ಸಂಸ್ಥೆಗಳು ಶುಲ್ಕ ಪಾವತಿಸುವಂತೆ ಒತ್ತಡ ಹೇರುವುದು ಶುಲ್ಕ ಹೆಚ್ಚಳ ಮಾಡುವುದು ಕಂಡುಬಂದಲ್ಲಿ ದೂರು ನೀಡಬಹುದಾಗಿದೆ. ಬೆಳಗ್ಗೆ  9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ದೂರವಾಣಿ ಸಂಖ್ಯೆ 080 23320311, ಮೊಬೈಲ್ 63647 28784, ಇಮೇಲ್ centralhelplinesnr@gmail.com ಗೆ ದೂರು ನೀಡಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...