alex Certify ಸಿಲಿಂಡರ್ ಖರೀದಿಗೆ ಸಹಾಯಧನ ನೀಡಲು ನಿರ್ದೇಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಲಿಂಡರ್ ಖರೀದಿಗೆ ಸಹಾಯಧನ ನೀಡಲು ನಿರ್ದೇಶನ

ಬೆಂಗಳೂರು: ಸಿಲಿಂಡರ್ ಖರೀದಿಗೆ ಅಶಕ್ತರಿಗೆ ಸಹಾಯ ಧನ ನೀಡುವ ಬಗ್ಗೆ ನೀತಿ ರೂಪಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಎಲ್ಪಿಜಿ ಸಿಲಿಂಡರ್ ಖರೀದಿಸಲು ಅಶಕ್ತರಾದ ಕುಟುಂಬಗಳಿಗೆ ಸಹಾಯ ಧನ ನೀಡಬೇಕು. ಸಿಲಿಂಡರ್ ಶುಲ್ಕ ಪಾವತಿಸಲು ಸಾಧ್ಯವಾಗದ ಕುಟುಂಬಗಳಿಗೆ ಅಡುಗೆ ಅನಿಲ ಸಿಲಿಂಡರ್ ಖರೀದಿಸಲು ನೆರವು ನೀಡುವ ಬಗ್ಗೆ ಶೀಘ್ರವೇ ನೀತಿ ರೂಪಿಸಿ ಈ ಬಗ್ಗೆ ಮಾಹಿತಿ ನೀಡುವಂತೆ ಹೈಕೋರ್ಟ್ ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಕುರಿತು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸೂಚನೆ ನೀಡಿದೆ. ಪ್ರಧಾನಮಂತ್ರಿ ಉಜ್ವಲ ಯೋಜನೆ ಮತ್ತು ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ ವ್ಯಾಪ್ತಿಗೆ ಒಳಪಡದ ಬಡವರಿಗೆ ಒಂದು ಬಾರಿ ಸಿಲಿಂಡರ್ ಖರೀದಿಗೆ ಸಹಾಯಧನ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸೂಚಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...