
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ದೊಡ್ಡ ಅಬ್ಬಿಗೆರೆ ಗ್ರಾಮದ ಸಮೀಪ ನೀರಿನಲ್ಲಿ ಮುಳುಗಿ ಸೋದರರಿಬ್ಬರು ಮೃತಪಟ್ಟಿದ್ದಾರೆ.
ನಂದಕುಮಾರ(14), ಪವನ್(12) ಮೃತಪಟ್ಟವರು ಎಂದು ಹೇಳಲಾಗಿದೆ. ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದಾಗ ದುರ್ಘಟನೆ ಸಂಭವಿಸಿದೆ.
ಸೋದರರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಚಿಕ್ಕಜಾಜೂರು ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.