alex Certify BIG NEWS: ನ.2 ರಿಂದ ಶಾಲೆ ಆರಂಭ, ಶಿಕ್ಷಕರಿಗೆ ಮಾತ್ರ ಕಡ್ಡಾಯ ಹಾಜರಾಗಲು ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನ.2 ರಿಂದ ಶಾಲೆ ಆರಂಭ, ಶಿಕ್ಷಕರಿಗೆ ಮಾತ್ರ ಕಡ್ಡಾಯ ಹಾಜರಾಗಲು ಸೂಚನೆ

ಬೆಂಗಳೂರು: ನವೆಂಬರ್ 2ರಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರು, ಸಿಬ್ಬಂದಿ ಕಡ್ಡಾಯವಾಗಿ ಶಾಲೆಗೆ ಹಾಜರಾಗಲು ಸೂಚನೆ ನೀಡಲಾಗಿದೆ. ಈ ಅವಧಿಯಲ್ಲಿ ಶಾಲೆಗೆ ವಿದ್ಯಾರ್ಥಿಗಳನ್ನು ಕರೆಸಬಾರದು ಎಂದು ತಿಳಿಸಲಾಗಿದೆ.

ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಈ ಯೋಜನೆಯಡಿ ವಿದ್ಯಾರ್ಥಿಗಳಲ್ಲಿ ಆಗಿರುವ ಪ್ರಗತಿಯನ್ನು ವಿಶ್ಲೇಷಿಸಿ ಮುಂದಿನ ಕಲಿಕೆಗೆ ಬೇಕಾದ ಯೋಜನೆ ಸಿದ್ಧಪಡಿಸುವಂತೆ ತಿಳಿಸಲಾಗಿದೆ.

ಶಿಕ್ಷಕರು ನೀಡಲಿರುವ ವರದಿ ಆಧರಿಸಿ ವಿದ್ಯಾಗಮ ಯೋಜನೆ ಮುಂದುವರೆಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ಅಕ್ಟೋಬರ್ 30 ರ ವರೆಗೆ ಶಿಕ್ಷಕರಿಗೆ ರಜೆ ನೀಡಲಾಗಿದ್ದು ನವಂಬರ್ 2 ರಿಂದ ಅಧಿಕೃತವಾಗಿ ಶಾಲೆಗಳು ಆರಂಭವಾಗಲಿವೆ. ಅಕ್ಟೋಬರ್ 31 ರಂದು ವಾಲ್ಮೀಕಿ ಜಯಂತಿ ಮತ್ತು ನವೆಂಬರ್ 1 ರಂದು ರಾಜ್ಯೋತ್ಸವ ಆಚರಣೆಗೆ ಶಿಕ್ಷಕರು ಮತ್ತು ಸಿಬ್ಬಂದಿ ಹಾಜರಾಗಲು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...