alex Certify ಸಿಎಂ, ಪೊಲೀಸ್ ಕಮಿಷನರ್ ವಿರುದ್ಧ ವಿಡಿಯೋ ಹರಿಬಿಟ್ಟ ವ್ಯಕ್ತಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ, ಪೊಲೀಸ್ ಕಮಿಷನರ್ ವಿರುದ್ಧ ವಿಡಿಯೋ ಹರಿಬಿಟ್ಟ ವ್ಯಕ್ತಿ ಅರೆಸ್ಟ್

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಮತ್ತು ಪೊಲೀಸ್ ಆಯುಕ್ತರ ಕುರಿತು ನಿಂದನೆಯ ವಿಡಿಯೋ ಹರಿಬಿಟ್ಟಿದ್ದ ವ್ಯಕ್ತಿಯನ್ನು ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

35 ವರ್ಷದ ಸುಧೀರ್ ಬಂಧಿತ ಆರೋಪಿ. ಈತನನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ನಿಮ್ಹಾನ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಈತನಿಗೆ ಹಿಂದೆ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರೂ ಗುಣಮುಖನಾಗಿರಲಿಲ್ಲ. ಇತ್ತೀಚೆಗೆ ಫೇಸ್ಬುಕ್ನಲ್ಲಿ ಮುಖ್ಯಮಂತ್ರಿ ಮತ್ತು ಪೊಲೀಸ್ ಕಮಿಷನರ್ ಬಗ್ಗೆ ಅವಹೇಳನಕಾರಿ ಹಾಗೂ ನಿಂದನಾತ್ಮಕ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದಾನೆ. ಮಾಹಿತಿ ಸಂಗ್ರಹಿಸಿದ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಪೊಲೀಸ್ ಕಾನ್ಸ್ ಟೇಬಲ್ ಅನಂತರಾಜು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲು ಹೋಗಿದ್ದ ವೇಳೆ ಈತ ಅವರ ಮೇಲೆಯೇ ಹಲ್ಲೆ ಮಾಡಿ ಬಟ್ಟೆ ಹರಿದು ಹಾಕಿದ್ದಾನೆ. ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ 9 ವರ್ಷದ ಹಿಂದೆ ಸಾಕಿದ ನಾಯಿ ಮೃತಪಟ್ಟಿದ್ದರಿಂದ ಈತ ಮಾನಸಿಕ ಖಿನ್ನತೆಗೆ ಒಳಗಾಗಿ ಚಿಕಿತ್ಸೆ ಪಡೆದಿರುವ ವಿಚಾರ ಗೊತ್ತಾಗಿದೆ. ಆತನನ್ನು ಕೋರ್ಟಿಗೆ ಹಾಜರುಪಡಿಸಿ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...