alex Certify ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ, ಆಸ್ಪತ್ರೆಯಲ್ಲೇ ನಡೆದಿದೆ ಆಘಾತಕಾರಿ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ, ಆಸ್ಪತ್ರೆಯಲ್ಲೇ ನಡೆದಿದೆ ಆಘಾತಕಾರಿ ಘಟನೆ

ಬೀದರ್: ಬ್ರಿಮ್ಸ್ ಆಸ್ಪತ್ರೆಯಲ್ಲಿ ಇಲಿ ಕಚ್ಚಿ ನವಜಾತ ಶಿಶು ಗಾಯಗೊಂಡ ಘಟನೆ ನಡೆದಿದೆ. ಮಗುವಿನ ತಾಯಿ ವಿಡಿಯೋದಲ್ಲಿ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ಬೀದರ್ ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಹಸುಗೂಸಿನ ಮೇಲೆ ಇಲಿಗಳು ದಾಳಿಮಾಡಿ ಕೈಕಾಲು ಕಚ್ಚಿದೆ. ಆಸ್ಪತ್ರೆಯಲ್ಲಿ ಇಲಿಗಳ ಕಾಟ ವಿಪರೀತವಾಗಿದೆ. ಗಾಯಗೊಂಡ ಮಗುವಿಗೆ ಚಿಕಿತ್ಸೆ ನೀಡಲಾಗಿದೆ.

ಜುಲೈ 28 ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು ಒಂದು ಮಗು ಮೃತಪಟ್ಟಿತ್ತು. ‌

ಮತ್ತೊಂದು ಮಗು ಆರೋಗ್ಯವಾಗಿದ್ದು ಆ ಮಗುವಿಗೆ ಇಲಿಗಳು ಕಚ್ಚಿವೆ. ಹೆರಿಗೆ ನಂತರ ತಾಯಿಯ ಹೊಕ್ಕಳ ಬಳ್ಳಿ ಕತ್ತರಿಸದೆ ನರ್ಸ್ ಗಳು ಹಾಗೆಯೇ ಬಿಟ್ಟಿದ್ದು, ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎನ್ನುವ ಆರೋಪವೂ ಕೇಳಿಬಂದಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ರಾಮಚಂದ್ರನ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರು ಮತ್ತು ಸಿಬ್ಬಂದಿಗೆ ವಾರ್ನಿಂಗ್ ಮಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...