ಬೆಂಗಳೂರು: ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಜಯನಗರದ ಅಪೋಲೋ ಆಸ್ಪತ್ರೆ ಶಾಖೆ ಮತ್ತು ವಿಕ್ರಂ ಆಸ್ಪತ್ರೆಗಳ ಒಪಿಡಿಯನ್ನು 48 ಗಂಟೆ ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ವಿಕ್ರಮ್ ಆಸ್ಪತ್ರೆ ಮತ್ತು ಅಪೋಲೊ ಆಸ್ಪತ್ರೆಯ ಹೊರ ರೋಗಿಗಳ ವಿಭಾಗ(ಒಪಿಡಿ)ಯನ್ನು 48 ಗಂಟೆಗಳ ಕಾಲ ಸ್ಥಗಿತಗೊಳಿಸುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ನಿಗದಿಯಾದ ಆಸ್ಪತ್ರೆಗಳು ಕೋವಿಡ್ ರೋಗಿಗಳು ಮತ್ತು ಸೋಂಕಿತರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕು. ಶೇಕಡ 50 ರಷ್ಟು ಹಾಸಿಗೆಗಳನ್ನು ನೀಡಬೇಕು ಎಂದು ಸರ್ಕಾರ ಆದೇಶ ಹೊರಡಿಸಿದ್ದರೂ ಇವೆರಡು ಆಸ್ಪತ್ರೆಗಳು ಆದೇಶವನ್ನು ಉಲ್ಲಂಘಿಸಿದ್ದವು. ಹೀಗಾಗಿ ಕಾರಣ ಕೇಳಿ ನೀಡಲಾಗಿದ್ದ ನೋಟಿಸ್ ನೀಡಲಾಗಿದ್ದು, ನೋಟಿಸ್ ಗೆ ಉತ್ತರ ಕೊಡದ ಹಿನ್ನೆಲೆಯಲ್ಲಿ ಒಪಿಡಿ ಬಂದ್ ಮಾಡಲು ಸೂಚನೆ ನೀಡಲಾಗಿದೆ.