
ಬೆಂಗಳೂರು: ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಬಡವರಿಗೆ ತಲಾ 20 ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ.
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ 1.56 ಲಕ್ಷ ಮನೆಗಳನ್ನು ಬಡವರಿಗೆ ನಿರ್ಮಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದ 188 ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 16ರೊಳಗೆ 97,134 ಮನೆಗಳ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಹೇಳಿದ್ದಾರೆ.