
ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರನ್ನು ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯ ಗೋಪನಕೊಪ್ಪ ಬಸ್ ನಿಲ್ದಾಣದ ಬಳಿ ನಡೆದಿದೆ. ಮಂಜುನಾಥ ಕಬ್ಬಿನ, ನಿಯಾಜ್ ಹತ್ಯೆಯಾದ ಯುವಕರು ಎಂದು ಹೇಳಲಾಗಿದೆ.
ಹಳೆಯ ವೈಷಮ್ಯದಿಂದ ಇಬ್ಬರನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಿಯಾಜ್ ಮತ್ತು ಮಂಜುನಾಥ ಜೊತೆಯಾಗಿದ್ದ ಸಂದರ್ಭದಲ್ಲಿ ದಾಳಿ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಡಬಲ್ ಮರ್ಡರ್ ಹುಬ್ಬಳ್ಳಿ ಜನರನ್ನು ಬೆಚ್ಚಿಬೀಳಿಸಿದೆ ಎಂದು ಹೇಳಲಾಗಿದೆ.