
ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಕಾರಣಕ್ಕೆ ಪತಿಯನ್ನು ಕೊಲೆ ಮಾಡಿದ ಮಹಿಳೆ ಹಾಗೂ ಆಕೆಯ ಪ್ರಿಯಕರ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ದಾಸರಹಳ್ಳಿ ನಿವಾಸಿ ಹರೀಶ್(24) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪತ್ನಿ ಹಾಗೂ ಆಕೆಯ ಪ್ರಿಯಕರ ಅಭಿಷೇಕ್, ಆತನ ಸ್ನೇಹಿತ ಮುಲ್ಲಾ ಅಲಿಯಾಸ್ ರಫಿ ಎಂಬುವರನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿದ್ದ ಪತ್ನಿ ನಾಪತ್ತೆಯಾಗಿರುವುದಾಗಿ ಸುಳ್ಳು ದೂರು ದಾಖಲಿಸಿದ್ದಳು. ತನಿಖೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.