ಬೆಂಗಳೂರು: ರಾಜ್ಯದಲ್ಲಿ ಇಂದು 5619 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ನಿನ್ನೆ ಸಂಜೆ 5 ಗಂಟೆಯಿಂದ ಇವತ್ತು ಸಂಜೆ 5 ಗಂಟೆಯವರೆಗಿನ ಅವಧಿಯಲ್ಲಿ ಇಷ್ಟೊಂದು ಜನರಿಗೆ ಕೊರೊನಾ ಸೋಂಕು ತಗುಲಿದೆ.
ಇವತ್ತು 5407 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 1,51,449 ಕ್ಕೆ ಏರಿಕೆಯಾಗಿದೆ. 73,958 ಸಕ್ರಿಯ ಪ್ರಕರಣಗಳಿದ್ದು, 74,679 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳಿಗಿಂತ ಬಿಡುಗಡೆಯಾದವರ ಸಂಖ್ಯೆ ಜಾಸ್ತಿಯಾಗಿದೆ.
ಇಂದಿನ ವರದಿ: ರಾಜ್ಯದಲ್ಲಿ ಇವತ್ತು ಒಂದೇ ದಿನ 5619 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸಂಖ್ಯೆಯ 1,51,449 ಕ್ಕೆ ಏರಿಕೆಯಾಗಿದೆ. 5407 ಜನ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಇದುವರೆಗೆ 74,679 ಜನ ಬಿಡುಗಡೆಯಾಗಿದ್ದಾರೆ. ಇವತ್ತು 100 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದು ಇದುವರೆಗೆ 2804 ಜನ ಸಾವನ್ನಪ್ಪಿದ್ದಾರೆ. 73, 958 ಸಕ್ರಿಯ ಪ್ರಕರಣಗಳಿದ್ದು, 633 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.